ರಾಜ್ಯ ಸರ್ಕಾರ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿಯೇ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ & ಪಾದರಕ್ಷೆ ವಿತರಿಸಲು 104 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.

ಈ ಬಗ್ಗೆ ಶಾಲಾ ಶಿಕ್ಷಣ & ಸಾಕ್ಷರತಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಶುಭಮಂಗಳ ಆದೇಶ ಹೊರಡಿಸಿದ್ದು, 1-10ನೆ ತರಗತಿಗಳಲ್ಲಿ ಅಂದಾಜು 36.56 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳಿಗೆ ಒಂದು ಜೊತೆ ಶೂ & ಎರಡು ಜೊತೆ ಸಾಕ್ಸ್ ಗಳನ್ನು ಒದಗಿಸಲಾಗುವುದು ಎಂದಿದ್ದಾರೆ.




