ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇನ್ನು ಮುಂದೆ EVM ಬದಲಿಗೆ ಹಳೆಯ ಮಾದರಿಯ ಮತಪತ್ರ ಬಳಸಲು ಅವಕಾಶ ನೀಡುವ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್(ತಿದ್ದುಪಡಿ) ವಿಧೇಯಕವು ವಿಧಾನಸಭೆಯಲ್ಲಿ ತೀವ್ರ ಗದ್ದಲದ ನಡುವೆ ಅಂಗೀಕಾರಗೊಂಡಿದೆ.

ಸಚಿವ ಪ್ರಿಯಾಂಕ್ ಖರ್ಗೆ ಮಂಡಿಸಿದ ಈ ವಿಧೇಯಕವು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ದೊಡ್ಡ ವಾಕ್ಸಮರಕ್ಕೆ ಕಾರಣವಾಯಿತು. ಮಸೂದೆ ವಿರೋಧಿಸಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮಸೂದೆಯ ಪ್ರತಿಯನ್ನು ಹರಿದು ಹಾಕಿ ಸದನದಿಂದ ಹೊರನಡೆದರು.




