ಅಕ್ಷಯ ಕಾಲೇಜಿನಲ್ಲಿ ಅಂಕುರ ಭಿತ್ತಿಪತ್ರ ಅನಾವರಣ ಕಾರ್ಯಕ್ರಮ

Share with

ಪುತ್ತೂರು: ಅಕ್ಷಯ ಪದವಿ ಕಾಲೇಜಿನಲ್ಲಿ ಅದ್ವಯ ಕನ್ನಡ ಸಾಹಿತ್ಯ ಸಂಘದಿಂದ ಅಂಕುರ ಭಿತ್ತಿಪತ್ರ ಅನಾವರಣ ಕಾರ್ಯಕ್ರಮ ಮಾ . 25ರಂದು ಅಕ್ಷಯ ಪದವಿ ಕಾಲೇಜಿನಲ್ಲಿ ಅದ್ವಯ ಕನ್ನಡ ಸಾಹಿತ್ಯ ಸಂಘದಿಂದ ಅಂಕುರ ಭಿತ್ತಿಪತ್ರ ಅನಾವರಣ ಕಾರ್ಯಕ್ರಮವು ನಡೆಯಿತು.

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷ ಉಮೇಶ್ ನಾಯಕ್ ಇವರು ವಿದ್ಯಾರ್ಥಿಗಳಿಗೆ ಭಿತ್ತಿಪತ್ರ ಸಾಹಿತ್ಯದ ಮೊದಲ ಹಂತ. ನೀವು ಇದರ ಸದುಪಯೋಗ ಪಡೆದುಕೊಂಡು ಸಾಹಿತ್ಯದ ವಿಷಯಗಳನ್ನು ಕಲಿಯಲು ಮತ್ತು ವಿಸ್ತರಿಸಲು ಉತ್ತಮ ಅವಕಾಶ ಎಂದು ಹೇಳಿ ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಜಯಂತ್ ನಡುಬೈಲು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಸಾಹಿತ್ಯದ ಚಟುವಟಿಕೆಗಳನ್ನು ನಿರಂತರವಾಗಿ ಮುಂದುವರೆಸಿ ಮತ್ತು ಇದನ್ನು ಹವ್ಯಾಸವಾಗಿ ಬೆಳೆಸಿಕೊಳ್ಳಿ ಮುಂದೆ ಅದೇ ಹವ್ಯಾಸ ನಿಮ್ಮಲ್ಲಿ ಕೌಶಲಗಳನ್ನು ಬಳಿಸುವಂತೆ ಮಾಡುತ್ತದೆ ಎಂದು ಹೇಳಿದರು.

ಇದೇ ವೇಳೆ ಕಾಲೇಜಿನ ಆರು ವಿಭಾಗಕ್ಕೆ ಒಂದರಂತೆ ವಿದ್ಯಾರ್ಥಿಗಳಿಗೆ ಪುಸ್ತಕ ಬಹುಮಾನವನ್ನು ನೀಡಲಾಯಿತು. ಬಹುಮಾನ ಪಡೆದುಕೊಂಡ ವಿದ್ಯಾರ್ಥಿಗಳು ಎಲ್ಲರಿಗೂ ವಾಚನ ಮಾಡಲು ಅವಕಾಶ ಸಿಗಬೇಕೆಂದು ಪುಸ್ತಕಗಳನ್ನು ಗ್ರಂಥಾಲಯಕ್ಕೆ ಹಸ್ತಾಂತರ ಮಾಡಿದರು.

ಕಾರ್ಯಕ್ರಮದಲ್ಲಿ ಗಣ್ಯರ ಜೊತೆ ಅಧ್ಯಯ ಕನ್ನಡ ಸಾಹಿತ್ಯ ಸಂಘದ ಸಂಯೋಜಕರಾದ ಶ್ರೀ ಹರೀಶ್ಚಂದ್ರ, ಅಕ್ಷಯ ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ರಕ್ಷಣ್, ಆದಯ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷರಾದ ಸಂತೋಷ್ ಮತ್ತು ಕಾರ್ಯದರ್ಶಿಯಾಗಿರುವ ಸುದೀಪ್ ಉಪಸ್ಥಿತರಿದ್ದರು.

ಉಪನ್ಯಾಸಕರಾದ ಶ್ರೀ ಹರಿಶ್ಚಂದ್ರ ಪ್ರಸ್ತಾವನೆಗೈದು, ಉಪನ್ಯಾಸಕಿ ಶ್ರೀಮತಿ ರಶ್ಮಿತಾ. ಎಸ್ ಬಹುಮಾನಿತರ ಪಟ್ಟಿ ವಾಚನ ಮಾಡಿ, ವಿದ್ಯಾರ್ಥಿಗಳಾದ ಕೋಮಲಾಕ್ಷಿ ಮತ್ತು ಕನಕ ಅತಿಥಿಗಳ ಪರಿಚಯ ವಾಚಿಸಿ, ದ ಪಶ್ರೀ ಪ್ರಾರ್ಥನೆ ಮಾಡಿ, ಲಾವಣ್ಯ ವಂದಿಸಿ, ಧನ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.


Share with

Leave a Reply

Your email address will not be published. Required fields are marked *