ಸಕಲೇಶಪುರ: ಸಿಡಿಲು ಬಡಿದು ಮಹಿಳೆ ಗಂಭೀರ, ಇಬ್ಬರಿಗೆ ಗಾಯ ಆಸ್ಪತ್ರೆಗೆ ದಾಖಲು

Share with

ಹಾಸನ :ಜಿಲ್ಲೆಯ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಹಾಸನ, ಸಕಲೇಶಪುರದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ. ಸಕಲೇಶಪುರ ತಾಲೂಕಿನ ಹರಗರಹಳ್ಳಿ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಮಹಿಳೆಯರಿಗೆ ಸಿಡಿಲು ಬಡಿದಿದ್ದು, ಓರ್ವರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಕುಂದರಗಿ ಗ್ರಾಮದ ರೂಪ, ಸುಮಿತ್ರ ಮತ್ತು ಜಯಮ್ಮ ಎಂದು ಗುರುತಿಸಲಾಗಿದೆ. ಗಾಯಾಳುಗಳಲ್ಲಿ ರೂಪ ಅವರ ಸ್ಥಿತಿ ಗಂಭೀರವಾಗಿದೆ. ಈ ಮೂವರು ಗ್ರಾಮದ ದೀನಹಳ್ಳಿ ಕಾಫಿ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದರು.

ಗಾಯಾಳುಗಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 


Share with

Leave a Reply

Your email address will not be published. Required fields are marked *