ಕಳೆದ ತಿಂಗಳು ರಿಜಿಸ್ಟರ್ ಮ್ಯಾರೇಜ್ ಆಗಿದ್ದ ಯುವ ಉದ್ಯಮಿ ಪತ್ನಿ ಮನೆಯಲ್ಲಿ ಆತ್ಮಹತ್ಯೆ

Share with

ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ರವಿವಾರ (ಮಾ.29) ನಡೆದಿದೆ.

ಬೆಳ್ತಂಗಡಿಯ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (36 ವ) ಆತ್ಮಹತ್ಯೆ ಮಾಡಿಕೊಂಡ ಯುವಕ.

ಮಾ. 17 ರಂದು ತಿಂಡಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸುದೀಪ್ ರೈ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಟದಲ್ಲಿದ್ದರು, ಆದರೆ ರವಿವಾರ ಬೆಳಗ್ಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಪುತ್ತೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕೆಲಸದಲ್ಲಿದ್ದ, ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ (28) ಜೊತೆ ಮನೆಯವರಿಗೆ ತಿಳಿಸದೆ ಫೆ.17 ರಂದು ವಿವಾಹ ನೋಂದಣಿ ಮಾಡಿಸಿಕೊಂಡದ್ದರು ಎನ್ನಲಾಗಿದೆ. ಪತ್ನಿಯ ಮನೆಯಲ್ಲಿ ಮಾ.17ರಂದು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರ ತನಿಖೆಯಿಂದ ಕಾರಣ ಬಯಲಾಗಬೇಕಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಉದ್ಯಮಿಯ ತಂದೆ ದಾಮೋದರ ರೈ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *