ಮೈಸೂರಿನ ಹುಣಸೂರಿನ ಹೃದಯ ವಿದ್ರಾವಕ ಘಟನೆ ನಡೆದಿದೆ. ಆಟವಾಡುತ್ತಿದ್ದ ಮಗುವೊಂದು ಪೂಜೆಗೆ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ನುಂಗಿ, ಉಸಿರುಗಟ್ಟಿ ಸಾವನ್ನಪ್ಪಿದೆ. ಮೃತಪಟ್ಟ ಮಗುವನ್ನು ಆರೂವರೆ ತಿಂಗಳ ಚಿನ್ಮಯಿ ಗೌಡ. ಮನೆಯ ಹೊಸ್ತಿಲಿನಲ್ಲಿ ಆಟವಾಡುತ್ತಾ ಮಗು ಆ ಹೂವನ್ನು ಬಾಯಿಗೆ ಹಾಕಿಕೊಂಡು ನುಂಗಿದೆ.

ಹೂವು ಗಂಟಲಿನಲ್ಲಿ ಸಿಲುಕಿಕೊಂಡಿದ್ದರಿಂದ ಮಗುವಿಗೆ ಉಸಿರಾಟದ ಸಮಸ್ಯೆಯಾಗಿದೆ. ಪೋಷಕರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿದೆ.




