ಮೂರು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

Share with

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಗುರುವಾರ ಸಂಜೆ ಬಳಿಕ ಉತ್ತಮ ಮಳೆಯಾಗಿದೆ. ಗಬ್ಬಲಡ್ಕ, ಮುಳ್ಳೇ ರಿಯ, ಬೆಳ್ಳಿಪ್ಪಾಡಿ, ಬೆಳ್ತಂಗಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಸುರಿದಿದೆ.

ಮಂಗಳೂರಿನಲ್ಲಿ 33.8 ಡಿ. ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.3 ಡಿ. ಸೆ. ಇಳಿಕೆ ಮತ್ತು 24.7 ಡಿ. ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಉಷ್ಣಾಂಶ ಏರಿಕೆ ಕಂಡಿತ್ತು.

ಭಾರತೀಯ ಹವಾಮಾನಿಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ ಸುರಿಯುವ ನಿರೀಕ್ಷೆ ಇದೆ. 30ರಿಂದ 40 ಕಿ. ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.


Share with

Leave a Reply

Your email address will not be published. Required fields are marked *