ಬೀದರ್: ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಪೊಲೀಸ್ ಪೇದೆ ಕಾರು ಹರಿದಿರುವ ಘಟನೆ ಭಾಲ್ಕಿ ಪಟ್ಟಣದಲ್ಲಿ ನಡೆದಿದೆ.

ಅಪಘಾತದಲ್ಲಿ ಭಾಲ್ಕಿ ಪಟ್ಟಣದ ನಿವಾಸಿ ಜ್ಞಾನಬಾಯಿ (45) ಸ್ಥಿತಿ ಗಂಭೀರವಾಗಿದ್ದು, ಪಟ್ಟಣದ ರಸ್ತೆಯಲ್ಲಿ ಕಸ ಗುಡಿಸುತ್ತಿದ್ದ ವೇಳೆ ವೇಗವಾಗಿ ಬಂದ ಮೇಹಕರ್ ಪೊಲೀಸ್ ಠಾಣೆಯ ಪಿಸಿ ಉಮಾಕಾಂತ್ ಕಾರು ಮಹಿಳೆ ಮೇಲೆ ಹರಿದಿದೆ.
ಗಂಭೀರ ಗಾಯಗೊಂಡ ಜ್ಞಾನಬಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಭಾಲ್ಕಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತದ ಮತ್ತು ಸ್ಥಳದಲ್ಲಿದ್ದ ಬಾಲಕನ ಆಕ್ರಂದನದ ಕರುಳು ಹಿಂಡುವಂತಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.




