ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಹಾಗೂ ಸಿಎಸ್ಕೆ ತಂಡಗಳ ನಡುವೆ ಭಾನುವಾರ ನಡೆಯುವ ಐಪಿಎಲ್ ಪಂದ್ಯಕ್ಕೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.

ಐಪಿಎಲ್ ಟಿಕೆಟ್ ಇದ್ದವರಷ್ಟೇ ಕ್ರೀಡಾಂಗಣದತ್ತ ಬನ್ನಿ. ಅನುಮಾನಾಸ್ಪದವಾಗಿ ಓಡಾಡುವವರ ವಿರುದ್ಧ ನಿಗಾ ಇಡಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ಸಿಂಗ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಐಪಿಎಲ್ ಟಿಕೆಟ್ ಇಲ್ಲದವರು ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬರುವುದು ಬೇಡ. ಕ್ರೀಡಾಂಗಣದ ಸುತ್ತ-ಮುತ್ತ ಸುಮ್ಮನೇ ಓಡಾಟ ನಡೆಸುವವರ ವಿರುದ್ಧ ಕ್ರಮ ತೆಗೆದುಕೊ ಳ್ಳುತ್ತೇವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಐಪಿಎಲ್ ಪಂದ್ಯ ವೀಕ್ಷಣೆಗೆ ಬರುವವರು ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಸಿದರೆ ಉತ್ತಮ ಎಂದು ತಿಳಿಸಿದರು.
ಮೊದಲ ಪಂದ್ಯದಲ್ಲಿ ಪೊಲೀಸ್ ಇಲಾಖೆ ಮತ್ತು ಇತರ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಿದ್ದಾರೆ. ಜನಸಂದಣಿ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ. ಎಂಟಿಸಿ ವತಿ ಯಿಂದ ಶಟಲ್ ಬಸ್ ಮತ್ತು ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡುವಂತೆ ವಿನಂತಿ ಸಲಾಗಿದೆ. ಕ್ವಿನ್ಸ್ ರೋಡ್, ಕಬ್ಬನ್ ರೋಡ್, ಲಿಂಕ್ ರೋಡ್ ಮತ್ತು ಎಂ.ಜಿ. ರೋಡ್ ಗಳಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಸಾರ್ವಜನಿಕರು ಸಹಕರಿಸಬೇಕು. ನಿಗದಿತ ಸಮಯಕ್ಕೆ ಮುಂಚಿತವಾಗಿ ಬಂದು ಹೋಲ್ಡಿಂಗ್ ಏರಿಯಾ ಬಳಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.




