ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಶೀಘ್ರದಲ್ಲೇ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಿದೆ. ಒಟ್ಟು 1,828 ಹುದ್ದೆಗಳಿಗೆ ಅಧಿಸೂಚನೆ ಹೊರಬೀಳಲಿದ್ದು, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ.

ವಿಶೇಷವೆಂದರೆ, ಇಲಾಖೆಯು ಅಗ್ನಿಶಾಮಕ ಸಿಬ್ಬಂದಿ, ‘ಅಗ್ನಿಶಾಮಕ ನಿರ್ವಾಹಕ’ ಎಂಬ ಹೊಸ ಶ್ರೇಣಿಯನ್ನು ಸೃಷ್ಟಿಸಿದೆ. ಈ ನೇಮಕಾತಿಯಲ್ಲಿ ಅಗ್ನಿಶಾಮಕ ಸಿಬ್ಬಂದಿಗೆ ಅತಿ ಹೆಚ್ಚು ಅಂದರೆ 1,502 ಸ್ಥಾನಗಳನ್ನು ಮೀಸಲಿಡಲಾಗಿದೆ.




