ಎಲ್ಲಾ ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಕೋಕ್..!

Share with

ಶಾಲಾ ವಾರ್ಷಿಕೋತ್ಸವ ಸೇರಿದಂತೆ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಸಭ್ಯ ಹಾಡುಗಳಿಗೆ ಮಕ್ಕಳು ನೃತ್ಯ ಮಾಡುವುದನ್ನು ಶಾಲಾ ಶಿಕ್ಷಣ ಇಲಾಖೆ ನಿಷೇಧಿಸಿದೆ.

ರಾಜ್ಯದ ಎಲ್ಲಾ ಖಾಸಗಿ & ಸರ್ಕಾರಿ ಶಾಲೆಗಳು ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಸಭ್ಯ ಹಾಡುಗಳಿಗೆ ಮಕ್ಕಳಿಂದ ನೃತ್ಯ ಮಾಡಿಸಿದರೆ, ಸಂಬಂಧಿತ ಶಾಲೆಯ ಮುಖ್ಯೋಪಾಧ್ಯಾಯರು & ಶಾಲೆ ನಿರ್ವಹಣೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಶಿಕ್ಷಣ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ದೇಶಭಕ್ತಿ, ಪ್ರೇರಣಾದಾಯಕ & ಸಕಾರಾತ್ಮಕ ಸಂದೇಶ ಸಾರುವ ಹಾಡುಗಳನ್ನು ಮಕ್ಕಳ ನೃತ್ಯಕ್ಕೆ ಬಳಸಿಕೊಳ್ಳಬೇಕು. ಕನ್ನಡ & ಸಂಸ್ಕೃತಿ, ಮೌಲ್ಯಗಳನ್ನು ಉತ್ತೇಜಿಸುವ ಗೀತೆಗಳಿಗೆ ಆದ್ಯತೆ ನೀಡಬೇಕು. ಹಾಡುಗಳ ಆಯ್ಕೆ ಪ್ರಕ್ರಿಯೆಯಲ್ಲಿ HMಗಳು ಸ್ವತಃ ಮುತುವರ್ಜಿವಹಿಸಬೇಕೆಂದು ಇಲಾಖೆ ಆದೇಶಿಸಿದೆ.


Share with

Leave a Reply

Your email address will not be published. Required fields are marked *