ನಂತೂರು ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ ಅವಘಡ

Share with

ಮಂಗಳೂರು: ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಕದ್ರಿ ಅಗ್ನಿಶಾಮಕದಳ ಸಿಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಬೆಂಕಿ ಹೊತ್ತಿಕೊಂಡ ಕೊಠಡಿಯಲ್ಲಿ ಶೇಖರಿಸಿಟ್ಟಿದ್ದ ವಿವಿಧ ಸೊತ್ತುಗಳು ಹಾನಿಗೀಡಾಗಿವೆ. ಒಟ್ಟು ಎಷ್ಟು ನಷ್ಟವಾಗಿದೆ ಎನ್ನುವ ಬಗ್ಗೆ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಅಗ್ನಿಶಾಮಕ ದಳದ ಸಿಬಂದಿ ಸಕಾಲದಲ್ಲಿ ಬೆಂಕಿ ಶಮನಗೊಳಿಸಿದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ. ಅಪಾರ್ಟ್ ಮೆಂಟ್ ಆಗಿದ್ದ ಕಾರಣ ಕೆಲ ಹೊತ್ತು ಆತಂಕಕ್ಕೆ ಕಾರಣವಾಯಿತು.


Share with

Leave a Reply

Your email address will not be published. Required fields are marked *