ಸವಣೂರು: ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಮೇ.5ರ ಮಂಗಳವಾರ ಕಾಣಿಯೂರು-ಮಂಜೇಶ್ವರ ಅಂತಾರಾಜ್ಯ ರಸ್ತೆಯ ಸವಣೂರಿನಿಂದ ಸ್ವಲ್ಪ ಮುಂದಿನ ತಿರುವಿನಲ್ಲಿ ನಡೆದಿದೆ.

ಘಟನೆಯ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟು, ಇನ್ನೋರ್ವ ಸವಾರ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಯುವಕ ಮಿತ್ತೂರು ಮೂಲದವರು ಎಂದು ಹೇಳಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




