CM ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಸಿದ್ದರಾಮಯ್ಯನವರು ಡಿಕೆಶಿ ಜೊತೆ ದೆಹಲಿಗೆ ತೆರಳಿದ್ದಾರೆ. ಅಲ್ಲಿಂದ ವಾಪಸಾದ ನಂತರ CLP ಸಭೆ ನಡೆಯಲಿದೆ. ನಾಳೆ ವಿಧಾನಸೌಧದಲ್ಲಿ ಕಾಂಗ್ರೆಸ್ನ ಶಾಸಕಾಂಗದ ಸಭೆ ನಡೆಯಲಿದೆ.

ಈ CLP ಸಭೆಯಲ್ಲಿ ಕರ್ನಾಟಕದ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಲಿದೆ. ಸದ್ಯಕ್ಕೆ ಸಭೆಯ ಬಗ್ಗೆ ಕಾಂಗ್ರೆಸ್ ಶಾಸಕರಿಗೆ ಮಾಹಿತಿ ನೀಡಲಾಗಿದ್ದು, ಎಲ್ಲ ಶಾಸಕರು ಬೆಂಗಳೂರಿನಲ್ಲಿಯೇ ಇರುವಂತೆ ಪಕ್ಷವು ಸೂಚಿಸಿದೆ ಎನ್ನಲಾಗಿದೆ.




