ಖಾಸಗಿ ಶಾಲಾ ವಿದ್ಯಾರ್ಥಿನಿ ನೇಣಿಗೆ ಶರಣು..!

Share with

ಉಜಿರೆ : ಪ್ರೌಢಶಾಲಾ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಉಜಿರೆಯ ಶಿವಾಜಿನಗರದ 5 ನೇ ಅಡ್ಡರಸ್ತೆಯಲ್ಲಿ ಜೂ.1 ರಂದು ಬೆಳಗ್ಗೆ ನಡೆದಿದೆ.

ಉಜಿರೆಯ ಖಾಸಗಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೊರಡುವ ವೇಳೆ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದ್ದು ಆತ್ಮಹತ್ಯೆಗೆ ನಿಕಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.ಮೃತರು ತಂದೆ ರಾಘವ ಆಚಾರ್ಯ, ತಾಯಿ ಕಲಾವತಿ ಅವರನ್ನು ಅಗಲಿದ್ದಾರೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *