ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಬೆಳಗ್ಗೆ (ಜೂನ್ 13) ಉಡುಪಿಯ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬೆಳಿಗ್ಗೆ ಕಾಪುವಿನಿಂದ ಹೊರಟು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದು ಪರ್ಯಾಯ ಶ್ರೀಗಳ ಆಶೀರ್ವಾದ ಪಡೆದು, ಸ್ವಲ್ಪ ಹೊತ್ತು ಮಾತುಕತೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.
ಬಳಿಕ ಜಿಲ್ಲಾ ಬಿಜೆಪಿ ವತಿಯಿಂದ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದ ವಠಾರದಲ್ಲಿ 2 ದಿನಗಳ ಕಾಲ ನಡೆಯಲಿರುವ ಜಿಲ್ಲಾ ಪ್ರಶಿಕ್ಷಣ ವರ್ಗದ ಉದ್ಘಾಟನೆ ನೆರವೇರಿಸಲಿದ್ದಾರೆ.
ಶುಕ್ರವಾರ (ಜೂ.12) ಸಂಜೆ ದೆಹಲಿಯಿಂದ ವಿಮಾನ ಮೂಲಕ ಹೊರಟು ರಾತ್ರಿ 8-15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಇಲ್ಲಿಂದ ರಸ್ತೆ ಮೂಲಕ ಕಾಪುವಿನಲ್ಲಿರುವ ಮಂಥನ್ ಬೀಚ್ ರೆಸಾರ್ಟ್ ನಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದರು.




