ಉಡುಪಿ: ಪ್ರಸಿದ್ಧ ಉದ್ಯಮಿ ಹಾಗೂ ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಅವರು ರವಿವಾರ(ಜೂ. 14) ರಾತ್ರಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಉಡುಪಿಗೆ ಆಗಮಿಸಿದ ಅವರು, ಕೃಷ್ಣನ ಸನ್ನಿಧಿಯಲ್ಲಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.
ಈ ವೇಳೆ ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಪಂಡಿತ್ ಚಂದ್ರಶೇಖರ ಶರ್ಮ, ಕರ್ನಾಟಕದ ರಿಲಯನ್ಸ್ ಜಿಯೋ ವ್ಯವಸ್ಥಾಪಕ ಧನಂಜಯ ಆರ್., ಶಿವನಂದನ,ಮಾಧವ ಶಾನುಭಾಗ್, ಜಯಪ್ರಕಾಶ್ ಶೆಟ್ಟಿ, ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು.




