ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ದಿನಾಂಕ ನಿಗದಿ

Share with

ಅನಂತಪುರ: ಇತಿಹಾಸ ಪ್ರಸಿದ್ಧ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿರುವ ಭವ್ಯ ಬ್ರಹ್ಮಕಲಶೋತ್ಸವದ ದಿನಾಂಕವನ್ನು ದೇವಸ್ಥಾನ ಆಡಳಿತ ಮಂಡಳಿ ಪ್ರಕಟಿಸಿದೆ.

2027ರ ಫೆಬ್ರವರಿ 23ರಿಂದ 28ರವರೆಗೆ ಆರು ದಿನಗಳ ಕಾಲ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಅವಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ವಿಶೇಷ ಪೂಜೆಗಳು ಹಾಗೂ ವೈದಿಕ ವಿಧಿವಿಧಾನಗಳು ನೆರವೇರಲಿವೆ.

ಮಹೋತ್ಸವದಲ್ಲಿ ರಾಜ್ಯ ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದ್ದು, ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ದೇವಸ್ಥಾನ ಆಡಳಿತ ಮಂಡಳಿ ಸಕಲ ಸಿದ್ಧತೆಗಳನ್ನು ಆರಂಭಿಸಿದೆ.

ಇಂದು ಪೂರ್ವಭಾವಿ ಸಭೆ:

ಇಂದು ನಡೆದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆಯಲ್ಲಿ, ದೇವಸ್ಥಾನದ 2027ರ ಬ್ರಹ್ಮಕಲಶೋತ್ಸವದ ದಿನಾಂಕವನ್ನು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಅಧಿಕೃತವಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಮಹೋತ್ಸವವು ಧರ್ಮ, ಭಕ್ತಿ ಮತ್ತು ಸಂಸ್ಕೃತಿಯ ಮಹಾಸಂಗಮವಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಅನಂತಪದ್ಮನಾಭ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಕರೆ ನೀಡಿದರು.


Share with

Leave a Reply

Your email address will not be published. Required fields are marked *