ರಾಜ್ಯಾದ್ಯಂತ ಇಂದಿನಿಂದ SIR ಅಭಿಯಾನ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸದಾಶಿವನಗರದ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ (ಎನ್ಯೂಮರೇಷನ್ ಫಾರಂ) ಪಡೆದು ಭರ್ತಿ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ಹಾಗೂ ಮತದಾರರಿಗೆ ಪ್ರೇರಣೆ ನೀಡಿದ್ದಾರೆ.

ಸಿಎಂ ತವರೂರು ಕನಕಪುರದ ದೊಡ್ಡಾಲಹಳ್ಳಿಯಲ್ಲಿ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಈ ವೇಳೆ ಹಾಜರಿದ್ದರು.




