ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಬಾಲಕಿಯರು, ಮಹಿಳೆ ಮೃತ್ಯು..!

Share with

ಮಂಗಳೂರು: ನಗರದ ನಾಗೋರಿ ಪ್ರದೇಶದಲ್ಲಿರುವ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ವಸತಿ ಪ್ರದೇಶದಲ್ಲಿ ಬುಧವಾರ ಗುಡ್ಡ ಕುಸಿತ ಸಂಭವಿಸಿದ್ದು ಮೂವರು ಸಾವನ್ನಪ್ಪಿದ್ದಾರೆ.

ಹೆಂಚಿನ ಮನೆ ಮಣ್ಣಿನಡಿ ಸಿಲುಕಿದ ಪರಿಣಾಮ ಆರು ಮಂದಿ ಅವಶೇಷಗಳ ಅಡಿ ಸಿಲುಕಿದ್ದರು.ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿ ಕಾರ್ಯಾಚರಣೆ ನಡೆಸಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರಲ್ಲಿ ಮೂವರನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮೂವರ ಮೃತದೇಹಗಳನ್ನು ರಕ್ಷಣಾ ಸಿಬಂದಿ ಹೊರತೆಗೆದಿದ್ದಾರೆ.

ಮೃತ ದುರ್ದೈವಿಗಳು ಅನಾಮಿಕ ಚೌರಾಸಿಯ(8), ಪರಿ(4) ಮತ್ತು ಶಾಂತ(46)ಎನ್ನುವವರಾಗಿದ್ದಾರೆ. ಅಲ್ಕಾ(14), ಅನುಷಾ (11) ಮತ್ತು ಬಾಲಕೃಷ್ಣ (48) ಎನ್ನುವವರು ಬದುಕಿ ಉಳಿದಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ಷಣಾ ಕಾರ್ಯ ಮುಕ್ತಾಯಗೊಂದಿಗೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *