ಭವಿಷ್ಯದಲ್ಲಿ ದೆಹಲಿಯ ಸಾರ್ವಜನಿಕ ಸಾರಿಗೆ ಬಸ್‌ಗಳು ಘನತ್ಯಾಜ್ಯದಿಂದ ಉತ್ಪಾದಿಸಿದ ಹೈಡೋಜನ್ ಇಂಧನ ಬಳಸಿ ಚಲಿಸಲಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ದೆಹಲಿಯಲ್ಲಿ BJP ಆಯೋಜಿಸಿದ್ದ ಯುವ ಸಮಾವೇಶದಲ್ಲಿ ಮಾತನಾಡಿದ ಅವರು, ನಗರಗಳಲ್ಲಿ ಸಂಗ್ರಹವಾಗುವ ಮುನ್ಸಿಪಲ್ ಘನತ್ಯಾಜ್ಯವನ್ನು ಬಳಸಿಕೊಂಡು ಹಸಿರು ಹೈಟ್ರೋಜನ್ ಇಂಧನವನ್ನು ಉತ್ಪಾದಿಸುವ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತದೆ. ಇದರಿಂದ ಕಸದ ವಿಲೇವಾರಿ ಸಮಸ್ಯೆಯೂ ಬಗೆಹರಿಯಲಿದ್ದು, ಇಂಧನವೂ ಸಿಗಲಿದೆ ಎಂದಿದ್ದಾರೆ.




