ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬಂಟ್ವಾಳ ತಾಲೂಕಿನ ಕಕ್ಕೆಪದವು ನಿವಾಸಿ ಬಾಲಕೃಷ್ಣ ಗೌಡ ಪುತ್ರಿ ಲಾವಣ್ಯ(21) ಅವರನ್ನು ಜು. 16 ರಂದು ಸಂಜೆ ಸುಮಾರು 5:30 ಕ್ಕೆ ಭೀಕರವಾಗಿ ಹತ್ಯೆ ಮಾಡಿದ ಆರೋಪಿ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಪುರುಷೋತ್ತಮ ಗೌಡ ಮಗ ಚೇತನ್ ಗೌಡ(22) ನನ್ನು ಪೊಲೀಸರು ಬಂಧಿಸಿದ್ದಾರೆ.

ಜು.17 ರಂದು ಬೆಳಗ್ಗೆ ಮಂಗಳೂರು ನಗರದ ವಾಮಾಂಜೂರಿನ ಪಚ್ಚನಾಡಿಯಲ್ಲಿ ಆರೋಪಿ ಚೇತನ್ ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ನಾಲ್ಕು ವರ್ಷಗಳ ಹಿಂದೆ ಬ್ರೇಕಪ್
ನಾಲ್ಕು ವರ್ಷಗಳ ಹಿಂದೆ ಲಾವಣ್ಯ ಮತ್ತು ಚೇತನ್ ನಡುವೆ ಪ್ರೇಮ ಸಂಬಂಧವಿದ್ದಿತ್ತು ಎನ್ನಲಾಗಿದೆ. ಆದರೆ ಯಾವುದೋ ಕಾರಣಕ್ಕೆ ಅವರ ನಡುವೆ ಬ್ರೇಕಪ್ ಆಗಿತ್ತು. ಆದರೂ ಚೇತನ್ ಲಾವಣ್ಯಳನ್ನು ಬಿಡದೆ ತೊಂದರೆ ನೀಡುತ್ತಿದ್ದ ಪ್ರೀತಿ ಮಾಡಲು ಒತ್ತಾಯ ಮಾಡುತ್ತಿದ್ದ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ನಿನ್ನೆ ಕೂಡ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ.
ಎನ್ ಕೌಂಟರ್ ಮಾಡಲು ವ್ಯಾಪಕ ಒತ್ತಾಯ
ಆರೋಪಿ ಚೇತನ್ ಮಾಡಿರುವ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಆತನನ್ನು ಎನ್ ಕೌಂಟರ್ ಮಾಡಿ ಹತ್ಯೆ ಮಾಡಬೇಕೆಂಬ ಒತ್ತಾಯ ಸಾರ್ವಜನಿಕರಲ್ಲಿ ಕೇಳಿಬರುತ್ತಿದೆ.
ನಕಲಿ ಎಡಿಟಿಂಗ್ ಫೋಟೋ
ಆರೋಪಿ ಚೇತನ್ ಭಜರಂಗದಳಕ್ಕೆ ಸೇರಿದವನು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿದ್ದು ಅದು ಎಡಿಟಿಂಗ್ ಫೋಟೋ ಎಂದು ಭಜರಂಗದಳ ಸ್ಪಷ್ಟನೆ ನೀಡಿದೆ




