ಉಪ್ಪಳ :ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ ಜುಲೈ 26 ರಂದು ನಡೆಯಲಿರುವ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮದಲ್ಲಿ ಸಬೇದಾರ್ ಮೇಜರ್ ಮತ್ತು ಗೌರವಾನ್ವಿತ ಕ್ಯಾಪ್ಟನ್ ಯೋಗೇಂದ್ರ ಸಿಂಗ್ ಯಾದವ್ (ಪರಮ ವೀರ ಚಕ್ರ) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಕಾರ್ಗಿಲ್ ಯುದ್ಧದ ಸಮಯದಲ್ಲಿ ಅವರ ಶೌರ್ಯಕ್ಕೆ ಭಾರತದ ಅತ್ಯುನ್ನತ ಮಿಲಿಟರಿ ಪ್ರಶಸ್ತಿಯಾದ ಪರಮ ವೀರ ಚಕ್ರ ಭಾರತ ಸರಕಾರ ಅವರಿಗೆ ನೀಡಿದೆ.




