ಲಾವಣ್ಯ ಹತ್ಯೆ ಪ್ರಕರಣದ ಆರೋಪಿಗೆ ಮುಂದುವರೆದ ಚಿಕಿತ್ಸೆ

Share with

ಬಂಟ್ವಾಳ: ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ, ಓಡಿಲ್ನಾಳ ನಿವಾಸಿ ಚೇತನ್, ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಪೊಲೀಸ್ ಭದ್ರತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಆರೋಪಿಯ ಬಂಧನವಾಗಿ ನಾಲ್ಕನೇ ದಿನವಾದ ಸೋಮವಾರವೂ ವೆನ್ಲಾಕ್ ಆಸ್ಪತ್ರೆಯ ವೈದ್ಯರು ಆತನನ್ನು ತೀವ್ರ ನಿಗಾ ಘಟಕದಲ್ಲೇ ಇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಬಂಧನದ ಸಂದರ್ಭದಲ್ಲಿ ತಾನು ಇಲಿ ಪಾಷಾಣ ಸೇವಿಸಿರುವುದಾಗಿ ಆರೋಪಿ ತಿಳಿಸಿದ್ದ. ಇದರ ಬೆನ್ನಲ್ಲೇ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.


Share with

Leave a Reply

Your email address will not be published. Required fields are marked *