ಕಾಸರಗೋಡು: ಮನೆಯಲ್ಲಿ ಗಾಂಜಾ ದಾಸ್ತಾನು ಇರಿಸಿದ ಪ್ರಕರಣದಲ್ಲಿ ಆರೋಪಿ ಮೀಂಜ ಗ್ರಾಮದ ಮಿಯಪದವು ನಿವಾಸಿ ವಿನ್ಸೆಂಟ್ ಡಿ’ಸೋಜಾ (38) ಅವರಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (2) ಒಂದು ವರ್ಷ ಕಠಿನ ಜೈಲು ಶಿಕ್ಷೆ ಮತ್ತು 20,000 ರೂ. ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದರೆ, ಅವರು ಹೆಚ್ಚುವರಿಯಾಗಿ ಎರಡು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.

2020 ಜೂನ್ 15 ರಂದು ನಡೆಸಿದ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ವಿನ್ಸೆಂಟ್ ಡಿ’ಸೋಜಾ ಅವರನ್ನು ಪೊಲೀಸರು ಬಂಧಿಸಿ ಹಾಸಿಗೆಯ ಕೆಳಗೆ ಅಡಗಿಸಿಟ್ಟಿದ್ದ 3.8 ಕೆ.ಜಿ. ಗಾಂಜಾವನ್ನು ಪೊಲೀಸರು ಪತ್ತೆ ಮಾಡಿದ್ದರು.
ಪ್ರಾಸಿಕ್ಯೂಷನ್ ಪರವಾಗಿ ಹೆಚ್ಚುವರಿ ಸರಕಾರಿ ವಕೀಲ ಚಂದ್ರಮೋಹನ್ ಜಿ. ಮತ್ತು ನ್ಯಾಯವಾದಿ ಚಿತ್ರಕಲಾ ವಾದ ಮಂಡಿಸಿದ್ದರು.




