ಕಾಲೇಜ್ ಹಾಸ್ಟೆಲ್ ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳು ಪೊಲೀಸ್ ವಶ

Share with

ಮಂಗಳೂರು: ನಗರದ ಸಮೀಪದ ಖಾಸಗಿ ಕಾಲೇಜೊಂದರ ಹಾಸ್ಟೆಲ್‌ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ನಡೆದಿದೆ.

ಹಾಸ್ಟೆಲ್‌ನಲ್ಲಿ ಕಾಲೇಜು ಸಿಬ್ಬಂದಿ ನಡೆಸಿದ ದಿಢೀರ್ ತಪಾಸಣೆ ವೇಳೆ ಮೂವರು ವಿದ್ಯಾರ್ಥಿಗಳು ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 290 ಗ್ರಾಂ ಗಾಂಜಾ ಪತ್ತೆಯಾಗಿದೆ. ತಕ್ಷಣವೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿ ವಿದ್ಯಾರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಂಧಿತ ವಿದ್ಯಾರ್ಥಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮೂವರೂ ಸಹ ಮಾದಕ ವಸ್ತುವನ್ನು ಸೇವಿಸಿರುವುದು ದೃಢಪಟ್ಟಿದೆ. ಈ ಸಂಬಂಧ ಎನ್‌ಡಿಪಿಎಸ್ (NDPS) ಕಾಯ್ದೆಯಡಿ, ಸೆಕ್ಷನ್ 27(b) (ಗಾಂಜಾ ಸೇವನೆ) ಮತ್ತು 8(c) ಸೇರಿದಂತೆ ಸೂಕ್ತ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ನಂತರ ಗಾಂಜಾ ತಂದಿದ್ದ ಪ್ರಮುಖ ವಿದ್ಯಾರ್ಥಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ವಿದ್ಯಾರ್ಥಿಯ ಶೈಕ್ಷಣಿಕ ಹಿನ್ನೆಲೆ ಮತ್ತು ವಶಪಡಿಸಿಕೊಂಡ ಗಾಂಜಾದ ಪ್ರಮಾಣವನ್ನು ಪರಿಗಣನೆಗೆ ತೆಗೆದುಕೊಂಡ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸಿದ ಪೆಡ್ಲರ್ (ಮಾರಾಟಗಾರ) ಯಾರೆಂಬುದರ ಬಗ್ಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *