ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಕಂದಕಕ್ಕೆ ಉರುಳಿದ ಬಸ್, 7 ಪ್ರಯಾಣಿಕರು ಸಾವು

Share with

ಶಿಮ್ಲಾ , ಆ.08: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್‌ಯೊಂದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಏಳು ಪ್ರಯಾಣಿಕರು ದುರ್ಮರಣಕ್ಕೀಡಾಗಿದ್ದಾರೆ. ಈ ಭೀಕರ ದುರಂತವು ಬೈರಾಗಢ-ಚಂಬಾ ಮಾರ್ಗದ ದೇವಿಕೋಠಿ ಬಳಿ ಸಂಭವಿಸಿದೆ. ಬೈರಾಗಢದಿಂದ ಚಂಬಾಗೆ ತೆರಳುತ್ತಿದ್ದ ಖಾಸಗಿ ಬಸ್, ದೇವಿಕೋಠಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ದಿಢೀರನೆ ಕಂದಕಕ್ಕೆ ಉರುಳಿಬಿದ್ದಿದೆ. ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ ಒಟ್ಟು 22 ಪ್ರಯಾಣಿಕರಿದ್ದರು. ಈ ಪೈಕಿ 7 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಹಲವು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಪ್ರಪಾತದಿಂದ ಮೇಲೆತ್ತಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ.


Share with

Leave a Reply

Your email address will not be published. Required fields are marked *