ಬಂದ್ ನಿರ್ಧಾರದಿಂದ ಹಿಂದೆ ಸರಿದ ಶಿವರಾಮೇಗೌಡ; ಪ್ರವೀಣ್ ಶೆಟ್ಟಿಗೂ ಬೆಂಬಲ ಇಲ್ಲ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡದಂತೆ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ಗೆ ಇದೀಗ ಬ್ರೇಕ್ ಬೀಳುವ ಸಾಧ್ಯತೆ ಎದುರಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ಮುಖಂಡ ಶಿವರಾಮೇಗೌಡ, ಕರ್ನಾಟಕ ಬಂದ್ ನಡೆಸುವ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಸದ್ಯ ಮಳೆಯ ಪರಿಸ್ಥಿತಿ ಉತ್ತಮವಾಗಿದ್ದು, ನೀರಿನ ಲಭ್ಯತೆಯ ಹಿನ್ನೆಲೆಯಲ್ಲಿ ಬಂದ್ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಇದೇ ವೇಳೆ ಮತ್ತೊಬ್ಬ ಕರವೇ ಮುಖಂಡ ಪ್ರವೀಣ್ ಶೆಟ್ಟಿ ಕೂಡ ಬಂದ್ಗೆ ತಮ್ಮ ಬೆಂಬಲವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆದರೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಈ ಕುರಿತು ಇನ್ನೂ ತಮ್ಮ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಹೀಗಾಗಿ ಆಗಸ್ಟ್ 13ರಂದು ನಿಜವಾಗಿಯೂ ಕರ್ನಾಟಕ ಬಂದ್ ನಡೆಯಲಿದೆಯೇ ಎಂಬ ಕುತೂಹಲ ಮುಂದುವರಿದಿದೆ.
ವಿವಿಧ ಕನ್ನಡಪರ ಸಂಘಟನೆಗಳ ಮುಂದಿನ ನಡೆ ಹಾಗೂ ವಾಟಾಳ್ ನಾಗರಾಜ್ ಅವರ ನಿರ್ಧಾರದ ಬಳಿಕ ಬಂದ್ ಕುರಿತು ಅಂತಿಮ ಚಿತ್ರಣ ಸ್ಪಷ್ಟವಾಗುವ ಸಾಧ್ಯತೆ ಇದೆ.




