ಹೋಟೆಲ್, ಪಬ್, ಬಾರ್‌ಗಳಿಗೆ ಹೊಸ ಮಾರ್ಗಸೂಚಿ!

Share with

ಅವಧಿ ಮೀರಿದ ಆಹಾರ, ಕೊಳೆತ ಮಾಂಸ ಬಳಕೆಗೆ ಕಡಿವಾಣ

ಬೆಂಗಳೂರು ಸೇರಿದಂತೆ ರಾಜ್ಯದ ಕೆಲ ಸ್ಟಾರ್ ಹೋಟೆಲ್‌ಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳು, ಕೊಳೆತ ಮಾಂಸ ಹಾಗೂ ತರಕಾರಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಎಚ್ಚೆತ್ತುಕೊಂಡಿದೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ರಾಜ್ಯದ ಹೋಟೆಲ್, ಪಬ್, ಬಾರ್ ಹಾಗೂ ರೆಸ್ಟೋರೆಂಟ್‌ಗಳಿಗೆ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.

ಆಹಾರ ಪದಾರ್ಥಗಳ ಗುಣಮಟ್ಟ, ಸಂಗ್ರಹಣೆ ಹಾಗೂ ಅವಧಿ ಮೀರಿದ ಆಹಾರದ ಬಳಕೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ಎಕ್ಸ್‌ಪೈರಿ ಹಾಗೂ ಫಂಗಸ್ ಹಿಡಿದ ಆಹಾರ ಪದಾರ್ಥಗಳ ಬಳಕೆಗೆ ಕಡಿವಾಣ ಹಾಕುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ.

ನಿಯಮ ಉಲ್ಲಂಘಿಸುವ ಹೋಟೆಲ್‌ಗಳು ಹಾಗೂ ಆಹಾರ ಮಳಿಗೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದ್ದು, ಆಹಾರ ಸುರಕ್ಷತಾ ಅಧಿಕಾರಿಗಳ ತಪಾಸಣೆಯೂ ಮತ್ತಷ್ಟು ಬಿಗಿಯಾಗಲಿದೆ.


Share with

Leave a Reply

Your email address will not be published. Required fields are marked *