2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ‘ವಾರಿಸ್ ಪಂಜಾಬ್ ದೇ’ ಅಭ್ಯರ್ಥಿ ಘೋಷಣೆ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಕೇಹರ್ ಸಿಂಗ್ ಅವರ ಪುತ್ರ ಸತ್ವಂತ್ ಸಿಂಗ್ ಇದೀಗ ಚುನಾವಣಾ ಕಣಕ್ಕಿಳಿಯಲಿದ್ದಾರೆ. 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ‘ವಾರಿಸ್ ಪಂಜಾಬ್ ದೇ’ ಸಂಘಟನೆ ಸತ್ವಂತ್ ಸಿಂಗ್ ಅವರನ್ನು ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ.
ಫತೇಘರ್ ಸಾಹಿಬ್ ಜಿಲ್ಲೆಯ ಬಸ್ಸಿ ಪಠಾಣಾ ವಿಧಾನಸಭಾ ಕ್ಷೇತ್ರದಿಂದ ಸತ್ವಂತ್ ಸಿಂಗ್ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಲಾಗಿದೆ. ಇಂದಿರಾ ಗಾಂಧಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಕೇಹರ್ ಸಿಂಗ್ ಅವರನ್ನು 1989ರ ಜನವರಿ 6ರಂದು ದೆಹಲಿಯ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು.




