ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Share with

ಪುತ್ತೂರು: ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಲಾಯಿತು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಭಾರತೀಯ ವಾಯುಸೇನೆಯ ನಿವೃತ್ತ ಸಾರ್ಜಂಟ್ ಶ್ರೀ ಸುರೇಶ್ K. U. ಅವರು, ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಸಲ್ಲಿಸುತ್ತಾ, ನಮ್ಮ ದೇಶ ಹೆಮ್ಮೆ ಪಡುವಂತೆ ಮಾಡಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದರು. ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದ್ದು, ವಿದ್ಯಾರ್ಥಿಗಳು ದೇಶಾಭಿಮಾನವನ್ನು ಬೆಳೆಸಿಕೊಂಡು ದೇಶಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಪ್ರಮಾಣವಚನ ಬೋಧಿಸಿದರು.
ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಜಯಂತ್ ನಡುಬೈಲು ಅವರು ಮಾತನಾಡಿ, ಸ್ವಾತಂತ್ರ್ಯವು ಪ್ರತಿಯೊಬ್ಬ ಮನುಷ್ಯನ ಹಕ್ಕಾಗಿದ್ದು, ಅದನ್ನು ಧನಾತ್ಮಕವಾಗಿ ಬಳಸಿಕೊಳ್ಳಬೇಕು ಎಂದರು. ಭಾರತ ಸದಾ ಸ್ವತಂತ್ರ ಹಾಗೂ ಶಕ್ತಿಶಾಲಿ ರಾಷ್ಟ್ರವಾಗಿರಬೇಕಾದರೆ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.
ಅಕ್ಷಯ ಪದವಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂಪತ್ ಕೆ. ಪಕ್ಕಳ ಅವರು ಮಾತನಾಡಿ, ಸ್ವಾತಂತ್ರ್ಯವು ಸುಲಭವಾಗಿ ದೊರೆತದ್ದಲ್ಲ. ಇದರ ಹಿಂದೆ ಅನೇಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ಹೋರಾಟವಿದೆ. ಅವರ ತ್ಯಾಗವನ್ನು ಸದಾ ಸ್ಮರಿಸಿ, ಅವರ ಆದರ್ಶಗಳನ್ನು ಜೀವನದಲ್ಲಿ ಪಾಲಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ನಿವೃತ್ತ ಅಧಿಕಾರಿ ಶ್ರೀ ಬಾಲಕೃಷ್ಣ ಮರೋಡಿ, ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ನಾರಾಯಣ ಪಿ.ವಿ., ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಶ್ರೀ ಅರ್ಪಿತ್ ಟಿ.ಎ., ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಅಭಿಲಾಷ್ ಕ್ಷತ್ರಿಯ, ಕಾಲೇಜಿನ ಎನ್.ಎಸ್.ಎಸ್. ಘಟಕಗಳ ಯೋಜನಾಧಿಕಾರಿಗಳಾದ ಶ್ರೀ ರಾಕೇಶ್ ಹಾಗೂ ಶ್ರೀ ಗಂಧರ್ವ, ಉಪಪ್ರಾಂಶುಪಾಲರಾದ ಶ್ರೀ ರಕ್ಷಣ್ ಟಿ.ಆರ್., IQAC ನಿರ್ದೇಶಕಿ ಶ್ರೀಮತಿ ರಶ್ಮಿ, ಉಪನ್ಯಾಸಕ-ಉಪನ್ಯಾಸಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಳಿಕ ಎನ್.ಎಸ್.ಎಸ್. ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ವಂದೇ ಮಾತರಂ, ಧ್ವಜಗೀತೆ ಹಾಗೂ ರಾಷ್ಟ್ರಗೀತೆಯೊಂದಿಗೆ ವಿದ್ಯಾರ್ಥಿಗಳ ದೇಶಭಕ್ತಿಯ ಸ್ವರಗಳು ಮೊಳಗಿದವು. ಕಾಲೇಜಿನ ವಿದ್ಯಾರ್ಥಿ ನಾಯಕ ಸೂರ್ಯ (ತೃತೀಯ ಬಿ.ಕಾಂ) ಸ್ವಾಗತಿಸಿದರು. ದೇವಿಕಾ (ತೃತೀಯ ಎಫ್.ಡಿ) ವಂದನಾರ್ಪಣೆ ನೆರವೇರಿಸಿದರು. ಗ್ರೀಷ್ಮ (ದ್ವಿತೀಯ ಬಿ.ಕಾಂ) ಕಾರ್ಯಕ್ರಮವನ್ನು ನಿರೂಪಿಸಿದರು.


Share with

Leave a Reply

Your email address will not be published. Required fields are marked *