80ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದಲ್ಲಿ ಬಹಳ ವಿಜೃಂಭಣೆಯಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಶ್ರೀನಿತ್ಯಾನಂದ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಯವರು ನೆರವೇರಿಸಿ ಭಾರತದ ಪ್ರಗತಿಗೆ ವಿದ್ಯಾರ್ಥಿಗಳು ಯುವಕರು ಶ್ರಮವಹಿಸಿ ಜವಾಬ್ದಾರಿಯುತವಾಗಿ ವರ್ತಿಸಿ ಭಾರತವನ್ನು ಜಗದ್ಗುರು ಎಂದೆನಿಸಿಕೊಳ್ಳುವುದಕ್ಕೆ ಕಾರಣರಾಗಬೇಕು. ಆ ಕ್ಷಣವು ಭಾರತೀಯರಿಗೆ ಒಂದು ಹೆಮ್ಮೆಯಾಗಿದೆ . ಹಾಗೆಯೇ ಸ್ವಾತಂತ್ರ್ಯೋತ್ಸವಕ್ಕಾಗಿ ತ್ಯಾಗ ಬಲಿದಾನ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಿ ಅವರನ್ನು ಸದಾ ಸ್ಮರಿಸುತ್ತಾ ಅವರು ಹಾಕಿಕೊಟ್ಟ ಮಾರ್ಗದರ್ಶನವು ನಮಗೆ ಸ್ಪೂರ್ತಿಯಾಗಬೇಕೆಂದು ನುಡಿದರು.
ಮುಖ್ಯ ಅತಿಥಿಯಾಗಿ ಮಾಜಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಜಗದ್ಗುರು ಶ್ರೀ ನಿತ್ಯಾನಂದ ಮಹಾಪೀಠಂ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿಗಳಾದ ಮೋನಪ್ಪ ಭಂಡಾರಿ ಅವರು ದೀಪ ಪ್ರಜ್ವಲಿಸಿ ಮಾತನಾಡಿದ ಹಿರಿಯರ ತ್ಯಾಗಗಳನ್ನು ಸ್ಮರಿಸುತ್ತಾ ಪ್ರಜೆಗಳು ಉತ್ತಮ ನಾಗರಿಕರಾಗಬೇಕಾದರೆ ನಮ್ಮನ್ನು ನಾವು ರೂಪುಗೊಳಿಸಿಕೊಳ್ಳಬೇಕೆಂದು ಹೇಳಿದರು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಹಾಡಲಾಯಿತು.
ಸಭೆಯಲ್ಲಿ ವಿದ್ಯಾಪೀಠದ ಪ್ರಾಂಶುಪಾಲೆಯಾದ ಮಲ್ಲಿಕಾ ಪ್ರಮೋದ್ , ಮಾತೃ ಸಮಿತಿಯ ಅಧ್ಯಕ್ಷೆ ಲೀಲಾವತಿ ರೈ, ಆಶ್ರಮದ ಟ್ರಸ್ಟಿಗಳಾದ ಮೋಹನ್ ದಾಸ್ ಉಪಸ್ಥಿತರಿದ್ದರು.





