ಮಂಗಳೂರು: ನಗರದ ಮರೋಳಿ ಸಮೀಪದ ಸೂರ್ಯ ವುಡ್ಸ್ ತಿರುವಿನಲ್ಲಿ ಟೂರಿಸ್ಟ್ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಭಾನುವಾರ ತಡರಾತ್ರಿ ಘಟನೆ ನಡೆದಿದೆ.
ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಕಾರಿನ ಮಧ್ಯಭಾಗದೊಳಗೆ ನುಗ್ಗಿದ್ದು, ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




