ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ 86ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.
ಈ ಸಾಧನೆಯೊಂದಿಗೆ, ಎರಡು ವಿಭಿನ್ನ ತಂಡಗಳ ವಿರುದ್ಧ ತಲಾ 10 ಏಕದಿನ ಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಶ್ರೀಲಂಕಾ ವಿರುದ್ಧ ಅವರು 10 ಏಕದಿನ ಶತಕಗಳನ್ನು ಗಳಿಸಿದ್ದರು.
ಅಲ್ಲದೆ, ಲಿಸ್ಟ್-ಎ ಕ್ರಿಕೆಟ್‌ನಲ್ಲಿ 60 ಶತಕಗಳ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನೂ ಕೊಹ್ಲಿ ಸರಿಗಟ್ಟಿದ್ದಾರೆ.




