ವಿದ್ಯಾರ್ಥಿನಿಯರ ಅಪಹರಣಕ್ಕೆ ಯತ್ನ; ಮೂವರು ಕಾನೂನು ವಿದ್ಯಾರ್ಥಿಗಳು ಸಸ್ಪೆಂಡ್..!

Share with

ನವದೆಹಲಿ: ದೆಹಲಿಯ ಮುಖರ್ಜಿ ನಗರದಲ್ಲಿ ಇಬ್ಬರು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿ, ನಿಂದಿಸಿ ಹಾಗೂ ಅಪಹರಣಕ್ಕೆ ಯತ್ನಿಸಿದ ಆರೋಪದ ಮೇಲೆ ದೆಹಲಿ ವಿಶ್ವವಿದ್ಯಾಲಯದ ಮೂವರು ಕಾನೂನು (LLB) ವಿದ್ಯಾರ್ಥಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.

ಸೆಪ್ಟೆಂಬರ್ 23ರ ಸಾಯಂಕಾಲ ಮುಖರ್ಜಿ ನಗರದ ವಿಜಯನಗರ ಹಕೀಕತ್ ಪಾರ್ಕ್ ಬಳಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಬಿಳಿ ಬಣ್ಣದ ಕಾರಿನಲ್ಲಿ ಬಂದ ಯುವಕರ ಗುಂಪು ಹಿಂಬಾಲಿಸಿ ಚೇಷ್ಟೆ ಮಾಡಿದೆ. ಈ ವೇಳೆ ಕಾರು ಚಾಲನೆ ಮಾಡುತ್ತಿದ್ದ ಕಾನೂನು ವಿದ್ಯಾರ್ಥಿ, ವಿದ್ಯಾರ್ಥಿನಿಗೆ ಕಮೆಂಟ್ ಮಾಡಿದ್ದಾನೆ. ಇದನ್ನು ಪ್ರಶ್ನಿಸಿ, ಜಾಗ ಖಾಲಿ ಮಾಡುವಂತೆ ವಿದ್ಯಾರ್ಥಿನಿಯರು ಹೇಳಿದಾಗ, ಕಾರಿನಲ್ಲಿದ್ದ ಯುವಕರು ಅಶ್ಲೀಲವಾಗಿ ನಿಂದಿಸಿ, ಅವರನ್ನು ಬಲವಂತವಾಗಿ ಕಾರಿನೊಳಗೆ ಎಳೆದುಕೊಳ್ಳಲು ಯತ್ನಿಸಿದ್ದಾರೆ. ಕೊನೆಗೆ ವಿದ್ಯಾರ್ಥಿನಿಯೊಬ್ಬಳು ತನ್ನ ಮೊಬೈಲ್ ಫೋನ್ ತೆಗೆದು ವಿಡಿಯೋ ರೆಕಾರ್ಡ್ ಮಾಡಲು ಪ್ರಾರಂಭಿಸಿದಾಗ, ಆರೋಪಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ. ಈ ಘಟನೆಯ ಕುರಿತು ಸಂತ್ರಸ್ತ ವಿದ್ಯಾರ್ಥಿನಿ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಘಟನೆ ಕುರಿತು ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ, ಅಲ್ಲದೆ ಘಟನೆ ಬೆನ್ನಲ್ಲೇ ವಿಶ್ವವಿದ್ಯಾಲಯ ಆಡಳಿತ ಮಂಡಳಿ ವಿದ್ಯಾರ್ಥಿಗಳ ವಿರುದ್ಧ ಕಠಿಣಕ್ರಮಕ್ಕೆ ಮುಂದಾಗಿದ್ದು ಅದರಂತೆ ಮೂವರು ಕಾನೂನು ವಿದ್ಯಾರ್ಥಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಜೊತೆಗೆ ಕ್ಯಾಂಪಸ್ ಪ್ರವೇಶಿಸದಂತೆ ನಿಷೇಧ ಹೇರಿದೆ. ಸದ್ಯ ಪ್ರಕರಣದ ಕುರಿತು ಪೊಲೀಸ್ ತನಿಖೆ ಮುಂದುವರಿದಿದೆ.


Share with

Leave a Reply

Your email address will not be published. Required fields are marked *