1.60 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ..; ಆರೋಪಿ ಬಂಧನ

Share with

ಮಂಗಳೂರು: ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಮಂಗಳವಾರ ಕಾವೂರು ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದು, ಆತನಿಂದ ಸುಮಾರು 1.60 ಲಕ್ಷ ರೂಪಾಯಿ ಮೌಲ್ಯದ 16 ಗ್ರಾಂ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಉಳ್ಳಾಲ ತಾಲೂಕಿನ ಕೆ.ಸಿ. ರೋಡ್ ನಿವಾಸಿ ಮೊಹಮ್ಮದ್ ಇರ್ಫಾನ್ ಎ.ಕೆ. (26) ಬಂಧಿತ ಆರೋಪಿ.

ಈತ ಮಂಗಳೂರಿನ ಮರಕಡ ಗ್ರಾಮದ ಬೊಂದೇಲ್‌ನಿಂದ ಮೂಡುಶೆಡ್ಡೆ ಕಡೆಗೆ ಹೋಗುವ ರಸ್ತೆಯ ಬಳಿ ಅನುಮಾನಾಸ್ಪದವಾಗಿ ನಿಂತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆತನ ಬಳಿಯಿದ್ದ 16 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.

ಬಂಧಿತ ಆರೋಪಿ ಮೊಹಮ್ಮದ್ ಇರ್ಫಾನ್ ಹಳೆಯ ಅಪರಾಧ ಹಿನ್ನೆಲೆ ಹೊಂದಿದ್ದು, ಈ ಹಿಂದೆ ಉಳ್ಳಾಲ ಹಾಗೂ ಪುಂಜಾಲಕಟ್ಟೆ ಪೊಲೀಸ್ ಠಾಣೆಗಳಲ್ಲಿ ರಾತ್ರಿ ವೇಳೆ ಕಳ್ಳತನ ಮಾಡಿದ ಪ್ರಕರಣಗಳು ಮತ್ತು ಉಳ್ಳಾಲ ಠಾಣೆಯಲ್ಲಿ ಗಾಂಜಾ ಸೇವನೆ ಪ್ರಕರಣ ದಾಖಲಾಗಿವೆ. ಪ್ರಸ್ತುತ ಘಟನೆಗೆ ಸಂಬಂಧಿಸಿದಂತೆ ಕಾವೂರು ಪೊಲೀಸ್‌ ಠಾಣೆಯಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


Share with

Leave a Reply

Your email address will not be published. Required fields are marked *