SSLC ಪರೀಕ್ಷಾ ಶುಲ್ಕ ಹೆಚ್ಚಳಕ್ಕೆ ಖಾಸಗಿ ಶಾಲಾ ಸಂಘಟನೆ ವಿರೋಧ

Share with

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ 676 ರೂ.ನಿಂದ 746 ರೂ.ಗೆ ಏರಿಕೆ ಆಗಿರುವುದು. ಈಗಾಗಲೇ ಹೆಚ್ಚುತ್ತಿರುವ ಶಿಕ್ಷಣ ವೆಚ್ಚಗಳ ನಡುವೆ, ಇಂತಹ ಹೆಚ್ಚುವರಿ ಹೊರೆ ಗ್ರಾಮೀಣ ವಿದ್ಯಾರ್ಥಿಗಳು, ಆರ್ಥಿಕವಾಗಿ ದುರ್ಬಲ ಕುಟುಂಬಗಳು ಮತ್ತು ಖಾಸಗಿ ಶಾಲೆಗಳ ಮೇಲೆ ಮತ್ತಷ್ಟು ಒತ್ತಡ ಹೇರುತ್ತದೆ ಎಂದು ಖಾಸಗಿ ಶಾಲೆಗಳ ಸಂಘಟನೆ ‘ಆವರ್ ಸ್ಕೂಲ್’ (ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳಿಗಾಗಿನ ಸಂಘಟನೆ) ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಅರಸ್ ಹೇಳಿದ್ದಾರೆ.

ಶುಲ್ಕ ಹೆಚ್ಚಳವನ್ನು ತಕ್ಷಣವೇ ಹಿಂಪಡೆದು, ಹಿಂದಿನ ದರದಲ್ಲೇ ಶುಲ್ಕ ಸ್ವೀಕರಿಸಬೇಕು. ಪರೀಕ್ಷಾ ವೆಚ್ಚದ ಲೆಕ್ಕಾಚಾರವನ್ನು ಸಾರ್ವಜನಿಕಗೊಳಿಸಬೇಕು ಹಾಗೂ ಶುಲ್ಕದ ಕಾರಣಕ್ಕೆ ಯಾವುದೇ ವಿದ್ಯಾರ್ಥಿಗೆ ಪರೀಕ್ಷಾ ಅವಕಾಶ ನಿರಾಕರಿಸಬಾರದು ಎಂದು ಒತ್ತಾಯಿಸಿದ್ದಾರೆ.


Share with

Leave a Reply

Your email address will not be published. Required fields are marked *