ಮಂಗಳೂರು: ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಖಾಸಗಿ ವಾಹನಗಳಲ್ಲಿ ನಿಯಮಬಾಹಿರವಾಗಿ ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ವಾಹನಗಳ ವಿರುದ್ಧ ಮಂಗಳೂರು ಪ್ರಾದೇಶಿಕ ಸಾರಿಗೆ ಕಚೇರಿಯಿಂದ ವಿಶೇಷ ತಪಾಸಣೆ ನಡೆಸಿ ಪ್ರಕರಣ ದಾಖಲಾಗಿದೆ.
ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಸುಮಾರು 30 ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂಬಂಧಪಟ್ಟ ವಾಹನಗಳ ಮಾಲಕರಿಗೆ ನೋಟಿಸ್ಗಳನ್ನು ಜಾರಿಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಕಾರ್ಯಾಚರಣೆ ಮುಂದುವರಿಸಲಾಗುತ್ತದೆ ಎಂದು ಮಂಗಳೂರು ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.





