ಭಕ್ತಿಭಾವದ ನಡುವೆ ವಾಟೇಹಳ್ಳಿ ಚೌಡಮ್ಮ ದೇವಿಯ ನವರಾತ್ರಿ ಆಚರಣೆ.

Share with


ಸಕಲೇಶಪುರ : ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ವಾಟೇಹಳ್ಳಿ ಗ್ರಾಮದ ಪ್ರಸಿದ್ಧ ಶ್ರೀ ಚೌಡಮ್ಮ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದ್ದು, ಉತ್ಸವದ ಅಂಗವಾಗಿ ದೇವಿಗೆ ವಿಶೇಷ ಪೂಜೆ, ಅಲಂಕಾರ ಹಾಗೂ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತಿದೆ. ದೇವಸ್ಥಾನಕ್ಕೆ ಗ್ರಾಮಸ್ಥರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿ ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ. ನವರಾತ್ರಿ ಉತ್ಸವವು ಗ್ರಾಮದಲ್ಲಿ ಧಾರ್ಮಿಕ ಸಂಭ್ರಮ ಹಾಗೂ ಭಕ್ತಿಮಯ ವಾತಾವರಣವನ್ನು ಮೂಡಿಸಿದೆ.


Share with

Leave a Reply

Your email address will not be published. Required fields are marked *