ಮನೆ ಕಳ್ಳತನಕ್ಕೆ ಯತ್ನ: ಆತಂಕದಲ್ಲಿ ಸ್ಥಳೀಯರು

Share with


ಹಾಸನ:  ನಗರದಲ್ಲಿ ಮನೆ ಕಳ್ಳತನಕ್ಕೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದ್ದು, ತಡರಾತ್ರಿ ಸುಮಾರು 2.55ರ ಸಮಯದಲ್ಲಿ ಅಪರಿಚಿತ ವ್ಯಕ್ತಿಗಳು ಮನೆಯೊಂದಕ್ಕೆ ನುಗ್ಗಲು ಪ್ರಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಮನೆಯ ಸುತ್ತಮುತ್ತ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಕಳ್ಳರ ಚಲನವಲನ ಸೆರೆಯಾಗಿದ್ದು, ಘಟನೆಯಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿದೆ. ಈ ಹಿನ್ನೆಲೆಯಲ್ಲಿ ರಾತ್ರಿ ವೇಳೆ ಮನೆಗಳ ಭದ್ರತೆ ಹೆಚ್ಚಿಸಿಕೊಳ್ಳುವಂತೆ ಹಾಗೂ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.


Share with

Tags:

Leave a Reply

Your email address will not be published. Required fields are marked *