ಅಧಿಕಾರಿಗಳ ವಿರುದ್ಧ ಶಾಸಕ ಗರಂ; ಹಾಸನದಲ್ಲಿ ಏನಿದು ಬೆಳವಣಿಗೆ?

Share with


ಹಾಸನ:  ಅಧಿಕಾರಿಗಳ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಸ್ವರೂಪ್ ಪ್ರಕಾಶ್.  ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸದ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಜನರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿರುವುದೇಕೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹಾರ ಒದಗಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಲೋಕೋಪಯೋಗಿ ಇಲಾಖೆಯ ನಿರ್ಲಕ್ಷ್ಯದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಆರೋಪಗಳೂ ಕೇಳಿಬರುತ್ತಿದ್ದು, ಮುಂಡಿಗನಹಳ್ಳಿ ಹಾಗೂ ಜವರಾಯಪಟ್ಟಣ ಕೆರೆಗಳ ಯು.ಜಿ.ಡಿ. ತ್ಯಾಜ್ಯ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.


Share with

Tags:

Leave a Reply

Your email address will not be published. Required fields are marked *