ಹೆಬ್ಬಸಾಲೆಯಲ್ಲಿ ಸಂಸ್ಕೃತಿ ಇಂಟರ್‌ನ್ಯಾಷನಲ್ ಶಾಲೆಗೆ ಭೂಮಿಪೂಜೆ: ಶಿಕ್ಷಣ ಕ್ಷೇತ್ರದಲ್ಲಿ ಹೊಸ ಹೆಜ್ಜೆ

Share with



ಸಕಲೇಶಪುರ: ತಾಲ್ಲೂಕಿನ ಹೆಬ್ಬಸಾಲೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ‘ಸಂಸ್ಕೃತಿ ಇಂಟರ್‌ನ್ಯಾಷನಲ್ ಶಾಲೆ’ಯ ಕಟ್ಟಡ ಕಾಮಗಾರಿಗೆ ಶಾಸಕ ಸಿಮೆಂಟ್ ಮಂಜುನಾಥ್ ಅವರು ಭೂಮಿಪೂಜೆ ನೆರವೇರಿಸಿ, ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷರಾದ ಎಚ್.ಎಸ್. ಸಂತೋಷ್, ಪ್ರತಿಮಾ ಸಂತೋಷ್, ಶಾಲೆಯ ಶಿಕ್ಷಕಿಯರು, ಪೋಷಕರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ನೂತನ ಶಾಲೆಯ ನಿರ್ಮಾಣ ಕಾರ್ಯಕ್ಕೆ ಶುಭ ಹಾರೈಸಿದ ಗಣ್ಯರು, ಈ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಶಾಲೆಯು ಮಹತ್ವದ ಪಾತ್ರ ವಹಿಸಲಿ ಎಂದು ಆಶಿಸಿದರು.


Share with

Leave a Reply

Your email address will not be published. Required fields are marked *