ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ಮಾಲಾಶ್ರೀ ಭೇಟಿ

Share with

ಕನ್ನಡ ಚಿತ್ರರಂಗದ ಖ್ಯಾತ ನಟಿ ಮಾಲಾಶ್ರೀ ಅವರು ಇಂದು ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣ ದೇವರ ದರ್ಶನ ಪಡೆದಿದ್ದಾರೆ.

ಪುತ್ರಿ ಸೇರಿದಂತೆ ಕುಟುಂಬ ಸಮೇತರಾಗಿ ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ನಟಿ ಮಾಲಾಶ್ರೀ ಅವರು, ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಈ ವೇಳೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ನಡೆಸಿದರು. ಬಳಿಕ ಮುಖ್ಯಪ್ರಾಣ ದೇವರ ಸನ್ನಿಧಾನಕ್ಕೂ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದರು.


Share with

Leave a Reply

Your email address will not be published. Required fields are marked *