ವಿಶ್ವಕರ್ಮ ಮಹೋತ್ಸವ: ಶಾಸಕ ಸಿಮೆಂಟ್ ಮಂಜು ಭಾಗಿ

Share with


ಸಕಲೇಶಪುರ: ನಗರದ ಗುರುದೇವಗೌಡ ಕಲ್ಯಾಣ ಮಂಟಪದಲ್ಲಿ ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ವಿಶ್ವಕರ್ಮ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಸಿಮೆಂಟ್ ಮಂಜು ಪಾಲ್ಗೊಂಡು ಸಭೆಯ ಮೆರುಗು ಹೆಚ್ಚಿಸಿದರು. ಕಾರ್ಯಕ್ರಮದಲ್ಲಿ ಪರಮಪೂಜ್ಯ ಅನಂತ ಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಸ್ವಾಮೀಜಿಗಳು ಹಾಗೂ ಪರಮಪೂಜ್ಯ ಶ್ರೀ ಜ್ಞಾನಪ್ರಸನ್ನ ವಿದ್ಯಾತೀರ್ಥ ಮಹಾಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಮುಖಂಡರು ಹಾಗೂ ಸಮಾಜದ ವಿವಿಧ ಗಣ್ಯರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಸಮಾಜದ ಏಕತೆ, ಸಂಸ್ಕೃತಿ, ಸಂಪ್ರದಾಯ ಮತ್ತು ಧಾರ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ. ವಿಶ್ವಕರ್ಮ ಸಮುದಾಯದ ಪ್ರಮುಖರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


Share with

Tags:

Leave a Reply

Your email address will not be published. Required fields are marked *