ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡವರ ಬದುಕಿಗೆ ದಾರಿದೀಪ

Share with



ಆಲೂರು : ತಾಲೂಕಿನ ಕೆ. ಹೊಸಕೋಟೆ ಹೋಬಳಿ, ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡ್ಲರು ಕೂಡಿಗೆಯ ಈರಮ್ಮ ಅವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಿರ್ಮಿಸಿಕೊಡಲಾದ 1010ನೇ ‘ವಾತ್ಸಲ್ಯ ಮನೆ’ಯನ್ನು ಹಸ್ತಾಂತರಿಸಿ ಸರ್ಕಾರ ಮತ್ತು ಜನಪ್ರತಿನಿಧಿಗಳು ಮಾಡಬೇಕಾದ ಜನಪರ ಕಾರ್ಯಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮಾಜಮುಖಿ ಸೇವೆಗಳ ಮೂಲಕ ಅತ್ಯಂತ ಯಶಸ್ವಿಯಾಗಿ ನಿರ್ವಹಿಸುತ್ತಿದೆ
ಯೋಜನೆ ವತಿಯಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ಆರ್ಥಿಕ ನೆರವು, ಯುವಕರಿಗೆ ಸ್ವಯಂ ಉದ್ಯೋಗ, ಕೆರೆ ಮತ್ತು ಸ್ಮಶಾನಗಳ ಅಭಿವೃದ್ಧಿ, ದೇವಾಲಯಗಳ ಜೀರ್ಣೋದ್ಧಾರ ಹಾಗೂ ಬಡವರಿಗೆ ಮನೆ ನಿರ್ಮಿಸಿಕೊಡುವಂತಹ ಅನೇಕ ಪುಣ್ಯಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ.ಕ್ಷೇತ್ರದಲ್ಲಿ ಈಗಾಗಲೇ ಸುಮಾರು 6 ರಿಂದ 8 ಮನೆಗಳನ್ನು ಧರ್ಮಸ್ಥಳ ಯೋಜನೆಯಡಿ ಹಸ್ತಾಂತರಿಸಲಾಗಿದ್ದು, ನಿರ್ಗತಿಕರ ಬದುಕಿಗೆ ಭರವಸೆಯ ಬೆಳಕಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೆಗ್ಗಡೆ ದಂಪತಿಗಳ ಸೇವೆಯನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜ್ಞಾನ ವಿಕಾಸ ನಿರ್ದೇಶಕರಾದ ದಿನೇಶ್ ಪೂಜಾರಿ, “ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕಳೆದ 44 ವರ್ಷಗಳಿಂದ ರಾಜ್ಯಾದ್ಯಂತ ಮಹಿಳಾ ಸಬಲೀಕರಣ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಜ್ಞಾನವಿಕಾಸ ಹಾಗೂ ವಾತ್ಸಲ್ಯ ಕಾರ್ಯಕ್ರಮಗಳ ಮೂಲಕ ಅಸಹಾಯಕರಿಗೆ ವಸತಿ, ಶಿಕ್ಷಣ ಮತ್ತು ಆರ್ಥಿಕ ನೆರವು ನೀಡಲಾಗುತ್ತಿದ್ದು, ಈವರೆಗೆ 1,000ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ. ಈ ವರ್ಷವೂ 250ಕ್ಕೂ ಹೆಚ್ಚು ಮನೆ ನಿರ್ಮಿಸುವ ಗುರಿ ಹೊಂದಿದೆ,” ಎಂದರು.


ಈ ಸಂದರ್ಭದಲ್ಲಿ ಯೋಜನಾಧಿಕಾರಿಗಳಾದ ಮಲ್ಲಿಕಾ, ಮೂಕಾಂಬಿಕಾ, ರಾಜೇಶ್ ಎಂ., ಜ್ಞಾನವಿಕಾಸ ಸಮನ್ವಯಾಧಿಕಾರಿ ಮಂಜುಳಾ, ಹಾಸನ ಜಿಲ್ಲಾ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಡಾ. ನವೀನ್ ಚಂದ್ರ ಶೆಟ್ಟಿ, ಪ್ರಮುಖರಾದ ಗಿರೀಶ್ ಮಂಜುನಾಥ್, ಉಮಾನಾಥ ಸುವರ್ಣ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *