ಕಿತ್ತಳೆ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿ ಅಪಘಾತ

Share with


ಹಾಸನ: ನಗರದ ರೈಲು ನಿಲ್ದಾಣದ ಸಮೀಪ ಶನಿವಾರ ಬೆಳಗಿನ ಜಾವ ಕಿತ್ತಳೆ ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಘಟನೆಯಿಂದಾಗಿ ಲಾರಿಯಲ್ಲಿದ್ದ ಕಿತ್ತಳೆ ಹಣ್ಣುಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಶನಿವಾರ (ಅ.31) ಬೆಳಗ್ಗೆ ಸುಮಾರು 6 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಕಿತ್ತಳೆ ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿ ರೈಲು ನಿಲ್ದಾಣದ ಸಮೀಪ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಿಂದ ಲಾರಿಗೆ ಹಾನಿಯಾಗಿದ್ದು, ರಸ್ತೆಯ ಮೇಲೆ ಕಿತ್ತಳೆ ಹಣ್ಣುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.


Share with

Tags:

Leave a Reply

Your email address will not be published. Required fields are marked *