ಸಾರಿಗೆ ಬಸ್ ಹಾಗೂ ನೀರಿನ ಟ್ಯಾಂಕರ್ ನಡುವೆ ಭೀಕರ ಅಪಘಾತ

Share with


ಹಾಸನ :ನಗರದ ನಂದಗೋಕುಲ ಕಲ್ಯಾಣ ಮಂಟಪದ ಮುಂಭಾಗದಲ್ಲಿ ಸಾರಿಗೆ ಬಸ್ ಹಾಗೂ ನೀರಿನ ಟ್ಯಾಂಕರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮವಾಗಿ ಸಾರಿಗೆ ಬಸ್ ಚಾಲಕನ ಕಾಲಿನ ಮೂಳೆ ಮುರಿದಿದ್ದು, ಗಾಯಗೊಂಡ ಚಾಲಕನನ್ನು ತಕ್ಷಣವೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.


Share with

Leave a Reply

Your email address will not be published. Required fields are marked *