ರೈತರ ಖಾತೆಗೆ ₹2,500 ಬೆಳೆ ಪರಿಹಾರ ಬಿಡುಗಡೆ

Share with

ಬೆಂಗಳೂರು: ತೀವ್ರ ಬರದಿಂದ ಸಂಕಷ್ಟಕ್ಕೀಡಾಗಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರದಿಂದ ಮಧ್ಯಂತರ ಬೆಳೆ ಪರಿಹಾರ ಬಿಡುಗಡೆ ಮಾಡಲಾಗಿದೆ. ವಿಧಾನಸೌಧದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪರಿಹಾರ ವಿತರಣೆಗೆ ಚಾಲನೆ ನೀಡಿದರು.

ಈ ಹಿಂದೆ ರಾಜ್ಯ ಸರ್ಕಾರ ರೈತರಿಗೆ ಮಧ್ಯಂತರ ಬೆಳೆ ಪರಿಹಾರವಾಗಿ ₹2,500 ನೀಡುವುದಾಗಿ ಘೋಷಿಸಿತ್ತು. ಅದರಂತೆ ಇದೀಗ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದ್ದು, ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆಯಾಗಲಿದೆ ಎಂದು ತಿಳಿಸಲಾಗಿದೆ.


Share with

Leave a Reply

Your email address will not be published. Required fields are marked *