ನಿರಂತರವಾಗಿ ಆರ್ಥಿಕ ಹೊರೆ ಹೇರುತ್ತಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಕರವೇ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Share with


ಸಕಲೇಶಪುರ: ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ರಮೇಶ್ ಪೂಜಾರಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ, ಸರ್ಕಾರಗಳ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ದಿನದಿಂದ ದಿನಕ್ಕೆ ಜನಸಾಮಾನ್ಯರ ಜೀವನ ನಿರ್ವಹಣೆ ಕಷ್ಟಕರವಾಗುತ್ತಿರುವ ಸಂದರ್ಭದಲ್ಲಿ ಸರ್ಕಾರಗಳು ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಬದಲು ಸಾರ್ವಜನಿಕರ ಮೇಲೆ ಮತ್ತಷ್ಟು ಹೊರೆ ಹೇರುತ್ತಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಜನಸಾಮಾನ್ಯರ ಹಿತದೃಷ್ಟಿಯಿಂದ ಸರ್ಕಾರಗಳು ತಮ್ಮ ನೀತಿಗಳನ್ನು ಮರುಪರಿಶೀಲಿಸಿ, ಜನರಿಗೆ ಅನುಕೂಲವಾಗುವಂತಹ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕರವೇ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Share with

Tags:

Leave a Reply

Your email address will not be published. Required fields are marked *