ದೀಪಾವಳಿ ಸಂಭ್ರಮದ ಬೆನ್ನಲ್ಲೇ ಭೀಕರ ಅಗ್ನಿ ದುರಂತ: ಒಂದೇ ಕುಟುಂಬದ 6 ಮಂದಿ ಸಾವು!

Share with

ಮಧ್ಯಪ್ರದೇಶ: ದೀಪಾವಳಿ ಹಬ್ಬದ ಸಂಭ್ರಮದ ಬೆನ್ನಲ್ಲೇ ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯ ಛಪಾರಾ ಪಟ್ಟಣದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಮಹಾವೀರ್ ವಾರ್ಡ್‌ನ ಜೈನ ಮಂದಿರದ ಸಮೀಪ ಚಿನ್ನದ ವ್ಯಾಪಾರಿ ಕುಂದನ್ ಲಾಲ್ ಸೋನಿ ಅವರ ಮೂರು ಅಂತಸ್ತಿನ ಮನೆಯಲ್ಲಿ ಸೋಮವಾರ ಮುಂಜಾನೆ ಸುಮಾರು 4ರಿಂದ 4.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ.

ಘಟನೆ ಸಂಭವಿಸಿದ ಸಂದರ್ಭದಲ್ಲಿ ಮನೆಯಲ್ಲಿ ಒಟ್ಟು 10 ಮಂದಿ ಇದ್ದರು. ಬೆಂಕಿಯ ತೀವ್ರತೆಗೆ ಆರು ಮಂದಿ ಮೃತಪಟ್ಟಿದ್ದು, ಉಳಿದ ನಾಲ್ವರನ್ನು ರಕ್ಷಿಸಲಾಗಿದೆ. ಅಗ್ನಿಶಾಮಕ ದಳ ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ.

ಮೃತರನ್ನು ಕುಂದನ್ ಲಾಲ್ ಸೋನಿ (75), ಅವರ ಪತ್ನಿ ರಾಜಕುಮಾರಿ ಸೋನಿ (65), ರಿತು ಸೋನಿ (42), ಸ್ಮೃತಿ ಸೋನಿ (40), ಸೂರ್ಯ ಸೋನಿ (45) ಹಾಗೂ ಆದಿತ್ಯ ಸೋನಿ (16) ಎಂದು ಗುರುತಿಸಲಾಗಿದೆ.

ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Share with

Leave a Reply

Your email address will not be published. Required fields are marked *